×
Ad

ಸಿಎಟಿ ಪರೀಕ್ಷೆ: ಕೀ ಉತ್ತರ ವೆಬ್‌ಸೈಟ್‌ನಲ್ಲಿ ಪ್ರಕಟ

Update: 2018-10-23 22:24 IST

ಬೆಂಗಳೂರು, ಅ. 23: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸಾರ್ಟಿಸಿ) ಮೇಲ್ವಿಚಾರಕೇತರ ಹುದ್ದೆಗಳಿಗೆ ಅ.6 ಮತ್ತು 7ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ಪ್ರಶ್ನೆಗಳಿಗೆ ಸರಿ ಉತ್ತರಗಳನ್ನು ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಅ.23 ರಂದು www.ksrtcjobs.com ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸದರಿ ಕೀ-ಉತ್ತರಗಳಿಗೆ ಆಕ್ಷೇಪಣೆಗಳೇನಾದರು ಇದ್ದಲ್ಲಿ ಈ-ಮೇಲ್ ವಿಳಾಸ cpmrct@ksrtc.org ಇಲ್ಲಿ ಅ.30ರ ಒಳಗಾಗಿ ಸಲ್ಲಿಸುವುದು. ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಂಸ್ಥೆ ಪ್ರಕಟಣೆ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News