ಲೋಕಾಯುಕ್ತದಿಂದ ಅರ್ಜಿ ಸ್ವೀಕಾರ

Update: 2018-10-23 17:48 GMT

ಉಡುಪಿ, ಅ.23: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಅ.25ರಂದು ಬೆಳಗ್ಗೆ 11:00ರಿಂದ 12:30ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ಅ.26ರಂದು ಬೆಳಗ್ಗೆ 11ರಿಂದ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರ ಹಾಗೂ ಅ.27ರಂದು ಬೆಳಗ್ಗೆ 11ರಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ದೂರುಗಳನ್ನು ಸ್ವೀಕರಿಸಲಾಗುತ್ತದೆ.

ಉಡುಪಿ ತಾಲೂಕಿಗೆ ಸಂಬಂದಪಟ್ಟಂತೆ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯಕ್ತದ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ, ದೂರವಾಣಿ:0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ, ದೂರವಾಣಿ: 0820-2536661ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಉಡುಪಿ ವಿಭಾಗದ ಪೊಲೀಸ್ ಉಪಾಧೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News