ಏಕದಿನ ಕ್ರಿಕೆಟ್ ನಲ್ಲಿ ತೆಂಡೂಲ್ಕರ್ ದಾಖಲೆ ಮುರಿದು ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ
Update: 2018-10-24 16:39 IST
ಹೊಸದಿಲ್ಲಿ, ಅ.24: ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದಲ್ಲಿ 10 ಸಾವಿರ ರನ್ ಪೂರೈಸಿದ ಆಟಗಾರನಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ. ಈ ಮೂಲಕ ಅವರು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ.
ಸಚಿನ್ ತೆಂಡೂಲ್ಕರ್ 2001ರಲ್ಲಿ 10 ಸಾವಿರ ರನ್ ಪೂರೈಸಿದ್ದರು. 259 ಇನ್ನಿಂಗ್ಸ್ ಗಳಲ್ಲಿ ಅವರು ಈ ಸಾಧನೆ ಮಾಡಿದ್ದರೆ, ಕೊಹ್ಲಿ 205 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ. 10 ಸಾವಿರ ರನ್ ಪೂರೈಸಿದ ಭಾರತದ 5ನೆ ಹಾಗು ವಿಶ್ವದ 13ನೆ ಆಟಗಾರನಾಗಿ ವಿರಾಟ್ ಹೊರಹೊಮ್ಮಿದ್ದಾರೆ.