ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ವಿಡಿಯೊ ದೃಶ್ಯಾವಳಿ ನೀಡಿ: ಹೈಕೋರ್ಟ್ ಆದೇಶ
Update: 2018-10-24 22:19 IST
ಬೆಂಗಳೂರು, ಅ.24: ಕಳೆದ ಮೇ 28ರಂದು ರಾಜರಾಜೇಶ್ವರಿನಗರ(ಆರ್.ಆರ್.ನಗರ) ವಿಧಾನಸಭೆ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆಯ ವಿಡಿಯೊ ದೃಶ್ಯಾವಳಿ ನೀಡಿ ಎಂದು ಹೈಕೋರ್ಟ್ ಚುನಾವಣಾಧಿಕಾರಿಗಳಿಗೆ ಆದೇಶಿಸಿದೆ.
ಈ ಸಂಬಂಧ ಪೀಣ್ಯ ನಿವಾಸಿ ರತ್ನಮ್ಮ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಮಾನ್ಯ ಮಾಡಿದೆ.
ಅಂತೆಯೇ, ಈ ಪ್ರಕರಣದಲ್ಲಿ ನಮ್ಮನ್ನು ಪ್ರತಿವಾದಿಗಳನ್ನಾಗಿ ಮಾಡುವ ಅವಶ್ಯಕತೆ ಇಲ್ಲ ಎಂದು ಚುನಾವಣಾ ಆಯೋಗ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನೂ ನ್ಯಾಯಪೀಠ ಮಾನ್ಯ ಮಾಡಿದೆ.
ಮುನಿರತ್ನ ಮತದಾರರಿಗೆ ಆಮಿಷ ಒಡ್ಡಿ ಆಯ್ಕೆಯಾಗಿದ್ದಾರೆ. ಹೀಗಾಗಿ, ಅವರ ಆಯ್ಕೆಯನ್ನು ಕಾನೂನು ಬಾಹಿರ ಎಂದು ಘೋಷಿಸಬೇಕು ಎಂಬುದು ಅರ್ಜಿದಾರರ ಕೋರಿಕೆ. ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಲಾಗಿದೆ.