×
Ad

ಅನಾರೋಗ್ಯ: ಕಾರ್ಯಕ್ರಮಕ್ಕೆ ಸಿಎಂ ಗೈರು

Update: 2018-10-24 22:37 IST

ಬೆಂಗಳೂರು, ಅ. 24: ಅನಾರೋಗ್ಯ ಕಾರಣದಿಂದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ನಿಗದಿಯಾಗಿದ್ದ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮತ್ತು ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರುಹಾಜರಾಗಿದ್ದರು.

ಜತೆಗೆ ಮಧ್ಯಾಹ್ನ 1 ಗಂಟೆಗೆ ನಿಗದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಹಾಗೂ ಧರ್ಮಸ್ಥಳ ಭೇಟಿ ಕಾರ್ಯಕ್ರಮವನ್ನು ಕೊನೆಕ್ಷಣದಲ್ಲಿ ರದ್ದು ಪಡಿಸಲಾಗಿದೆ. ಉದರ ಬೇನೆಯ ಕಾರಣದಿಂದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News