ಬೆಂಗಳೂರು: ಯುವಕನ ಕೊಲೆ
Update: 2018-10-24 22:38 IST
ಬೆಂಗಳೂರು, ಅ.24: ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ, ಕೊಲೆಗೈದಿರುವ ಘಟನೆ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶ ಮೂಲದ ಚಕ್ರಾದಾರ (29) ಕೊಲೆಯಾದ ಯುವಕ ಪೊಲೀಸರು ತಿಳಿಸಿದ್ದಾರೆ.
ನಗರದ ಚಿಕ್ಕತೋಗೂರಿನಲ್ಲಿ ವಾಸವಾಗಿದ್ದ ಚಕ್ರಾದಾರ ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ಈತನ ಮೇಲೆ ಉದ್ದೇಶ ಪೂರ್ವಕವಾಗಿಯೇ ಹಲ್ಲೆ ನಡೆಸಿ, ಕೊಲೆಗೈದಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ರಸ್ತೆಯಲ್ಲಿ ಬರುತ್ತಿದ್ದ ಸ್ಥಳೀಯರು ಶವವನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.