ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

Update: 2018-10-25 16:53 GMT

ಹೊಸದಿಲ್ಲಿ, ಅ.25: ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಹಾಗು ಇತರ 8 ಮಂದಿಯ ವಿರುದ್ಧ ಜಾರಿ ನಿರ್ದೇಶನಾಲಯವು ಚಾರ್ಜ್ ಶೀಟ್ ಸಲ್ಲಿಸಿದೆ.

ನವೆಂಬರ್ 26ರಂದು ಸಿಬಿಐ ವಿಶೇಷ ನ್ಯಾಯಾಲಯವು ಈ ಚಾರ್ಜ್ ಶೀಟನ್ನು ಪರಿಗಣನೆಗೆ ತೆಗೆದುಕೊಳ್ಳಲಿದೆ.

ಪಿ. ಚಿದಂಬರಂ ಮಧ್ಯಂತರ ಜಾಮೀನು ವಿಸ್ತರಣೆ

ಐಎನ್‌ಎಕ್ಸ್ ಮಾಧ್ಯಮ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ದಿಲ್ಲಿ ಉಚ್ಚ ನ್ಯಾಯಾಲಯ ಗುರುವಾರ ವಿಸ್ತರಿಸಿದೆ. ಬಂಧಿಸದಂತೆ ನವೆಂಬರ್ 29ರ ವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಸೆಪ್ಟಂಬರ್ 28ರಂದು ನ್ಯಾಯಾಲಯ ಮಧ್ಯಂತರ ಜಾಮೀನನ್ನು ಇಂದಿನ ವರೆಗೆ ವಿಸ್ತರಿಸಿತ್ತು. ಕೇಂದ್ರ ತನಿಖಾ ಸಂಸ್ಥೆ ಹಾಗೂ ಜಾರಿ ನಿರ್ದೇಶನಾಲಯ ಬಂಧಿಸದಂತೆ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಚಿದಂಬರಂ ಮನವಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News