ಸರಕಾರದಿಂದ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು
Update: 2018-10-25 19:37 IST
ಬೆಂಗಳೂರು, ಅ. 25: ಜಮಖಂಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಶಾದಿಮಹಲ್/ ಸಮುದಾಯ ಭವನ ನಿರ್ಮಾಣಕ್ಕೆ ಅಂಜುಮನ್-ಎ-ಇಸ್ಲಾಂ ಜಮಖಂಡಿ ಇವರಿಗೆ ಮಂಜೂರು ಮಾಡಿ ಆದೇಶ ಹೊರಡಿಸುವ ಮೂಲಕ ಸರಕಾರ, ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಆರೋಪಿಸಿ ಬಿಜೆಪಿ, ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಗುರುವಾರ ಬಿಜೆಪಿ ವಕ್ತಾರ ಗೋ.ಮಧುಸೂದನ್, ಆನಂದ್ ಹಾಗೂ ದತ್ತಗುರು ಹೆಗಡೆ ನೇತೃತ್ವದ ನಿಯೋಗ, ಸಚಿವ ಸಂಪುಟ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಕೈಗೊಳ್ಳುತ್ತಿದ್ದು, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಆದುದರಿಂದ ಇದನ್ನು ಕೂಡಲೇ ತಡೆ ಹಿಡಿಯಬೇಕು. ಈ ಕುರಿತು ರಾಜ್ಯ ಸರಕಾರ ನೋಟಿಸ್ ಜಾರಿ ಮಾಡಬೇಕೆಂದು ಆಗ್ರಹಿಸಲಾಗಿದೆ.