×
Ad

ಕರ್ನಾಟಕ ನನ್ನ ಮನೆ: ನಟ ಚೇತನ್

Update: 2018-10-25 21:04 IST

ಬೆಂಗಳೂರು, ಅ.25: ಕೆಲವು ಮಾಧ್ಯಮಗಳಲ್ಲಿ ನಾನು ಅಮೆರಿಕಾಕ್ಕೆ ಹೋಗುತ್ತೇನೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕ ನನ್ನ ಮನೆ. ನಾನು ಇಲ್ಲಿಯೆ ಬದುಕಿ, ನಾಡಿನ ಸೇವೆಗಾಗಿ ದುಡಿಯುತ್ತೇನೆಂದು ನಟ ಚೇತನ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಳೆದ ನಾಲ್ಕು ವರ್ಷದಿಂದ ಅಮೆರಿಕಾಕ್ಕೆ ಹೋಗಿಲ್ಲ. ಇನ್ನು ಮುಂದೆಯು ಹೋಗುವಂತಹ ಯಾವುದೆ ನಿರ್ಧಾರವಿಲ್ಲ. ಕನ್ನಡ ನಾಡಿನ ಜನತೆಯ ಸೇವೆಯಲ್ಲಿ ನಿರತನಾಗಿರುತ್ತೇನೆಂದು ತಿಳಿಸಿದ್ದಾರೆ.

ನಟಿ ಶೃತಿ ಹರಿಹರನ್ ಲೈಂಗಿಕ ಕಿರುಕುಳ ಪ್ರಕರಣದ ವಿಷಯದಲ್ಲಿ ಫೈರ್‌ನ ಆಂತರಿಕ ದೂರು ಸಮಿತಿಯಲ್ಲಿ ದೂರು ದಾಖಲಿಸಿಲ್ಲ. ಮೂರು ತಿಂಗಳ ಒಳಗೆ ನಡೆಯುವ ಲೈಂಗಿಕ ಕಿರುಕುಳದ ಪ್ರಕರಣಗಳನ್ನಷ್ಟೆ ಕಾನೂನಿನ ಪ್ರಕಾರ ಆಂತರಿಕ ದೂರು ಸಮಿತಿಯು ತನಿಖೆ ನಡೆಸಲು ಸಾಧ್ಯ. ಇದು ನಮ್ಮ ಆಂತರಿಕ ದೂರು ಸಮಿತಿಯ ಮಿತಿ. ಎರಡು ವರ್ಷಗಳ ಹಿಂದೆ ಈ ಘಟನೆ ನಡೆದಿರುವುದರಿಂದಾಗಿ ಇದು ನಮ್ಮ ಮಿತಿಯೊಳಗೆ ಬರುವುದಿಲ್ಲ ಎಂದು ಅವರು ಹೇಳಿದರು.

ಶೃತಿ ಫೈರ್‌ನ ಆಂತರಿಕ ದೂರು ಸಮಿತಿಯ ಸದಸ್ಯರಾಗಿದ್ದಾರೆ. ಫೈರ್‌ನ ಪ್ರಮುಖ ಸ್ಥಾನಗಳಲ್ಲಿದ್ದ ಕೆಲವು ಸದಸ್ಯರು ಸಂಸ್ಥೆಯನ್ನು ತೊರೆದಿದ್ದಾರೆ. ಅವರು ಯಾವುದೇ ಕಾರಣಕ್ಕಾದರು ಸಂಸ್ಥೆಯನ್ನು ತೊರೆಯಲು ಮುಕ್ತರಾಗಿದ್ದಾರೆ. ಫೈರ್‌ನ ಸಂಸ್ಥಾಪಕನಾಗಿ ಮಹಿಳೆಯರು ಯಾವಾಗಲೂ ಶಕ್ತಿಯುತ ಸ್ಥಾನದಲ್ಲಿರಬೇಕು ಎಂದು ನಾನು ನಂಬಿದ್ದೆೀನೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News