ಸೌದಿ ಯುವರಾಜ ಜೊತೆ ಟರ್ಕಿ ಅಧ್ಯಕ್ಷರ ಫೋನ್ ಸಂಭಾಷಣೆ

Update: 2018-10-25 16:37 GMT

ಅಂಕಾರ, ಅ. 25: ಇಸ್ತಾಂಬುಲ್‌ನಲ್ಲಿರುವ ಸೌದಿ ಅರೇಬಿಯ ಕೌನ್ಸುಲೇಟ್ ಕಚೇರಿಯಲ್ಲಿ ಸೌದಿ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಯಾದ ಬಳಿಕ ಮೊದಲ ಬಾರಿಗೆ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ದೊಗಾನ್ ಬುಧವಾರ ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಜೊತೆ ಫೋನ್‌ನಲ್ಲಿ ಮಾತನಾಡಿದರು ಎಂದು ಅಧ್ಯಕ್ಷೀಯ ಕಚೇರಿಯ ಮೂಲಗಳು ತಿಳಿಸಿವೆ.

ಖಶೋಗಿ ಹತ್ಯೆಯ ಎಲ್ಲ ಆಯಾಮಗಳ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಲು ತೆಗೆದುಕೊಳ್ಳಬೇಕಾದ ಜಂಟಿ ಕ್ರಮಗಳ ಬಗ್ಗೆ ಅವರು ಚರ್ಚಿಸಿದರು ಎಂದು ಅವು ಹೇಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News