ಬಿ.ವಿ.ಹರೀಶ್ ಅಕ್ರಮ ಬಂಧನ ಆರೋಪ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2018-10-25 16:42 GMT

ಬೆಂಗಳೂರು, ಅ.25: ಕಾನೂನು ಬಾಹಿರವಾಗಿ ಬಿಟ್‌ಕಾಯಿನ್ ಎಟಿಎಂ ತೆರೆದಿದ್ದ ಆರೋಪದ ಮೇಲೆ ಯೂನೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸಹ ಮುಖ್ಯ ನಿರ್ವಹಣಾಧಿಕಾರಿ ಬಿ.ವಿ.ಹರೀಶ್‌ರನ್ನು ಸೈಬರ್ ಪೊಲೀಸರು ಅಕ್ರಮವಾಗಿ ಬಂಧಿಸಿದ್ಧಾರೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಯೂನೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮುಖ್ಯ ನಿರ್ವಹಣಾಧಿಕಾರಿ ಸಾತ್ವಿಕ್ ವಿಶ್ವನಾಥ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರಾಘವೇಂದ್ರ ಎಸ್.ಚೌಹಾಣ್ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಲಾಗಿದೆ.

ಬಿ.ವಿ.ಹರೀಶ್ ಅವರನ್ನು ಪೊಲೀಸರು ಅಕ್ರಮವಾಗಿ ಬಂಧಿಸಿಲ್ಲ. ಕಾನೂನು ಬದ್ಧವಾಗಿಯೇ ಬಂಧನ ಪ್ರಕ್ರಿಯೆ ನಡೆಸಿದ್ದಾರೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News