ಸರ್ವೋದಯ ಶಿಕ್ಷಣ ಟ್ರಸ್ಟ್‌ನಲ್ಲಿ ಕಾನೂನು ರೀತಿ ಕೆಲಸ: ಬಸವರಾಜ ಹೊರಟ್ಟಿ

Update: 2018-10-26 14:10 GMT

ಬೆಂಗಳೂರು, ಅ.26: ಧಾರವಾಡ ಜಿಲ್ಲೆಯ ಸರ್ವೋದಯ ಶಿಕ್ಷಣ ಟ್ರಸ್ಟ್‌ನ ಆಡಳಿತದಲ್ಲಿ ನಾವು ನಿಯಮಗಳನ್ನು ಮೀರಿ ಯಾವುದೇ ಕೆಲಸಗಳನ್ನು ಮಾಡಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಣೆ ನೀಡಿದರು.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನ ಅನ್ವಯ ನಾವು ಕೆಲಸ ಮಾಡಿದ್ದೇವೆ. ಈ ಟ್ರಸ್ಟ್‌ನ ಪ್ರಕರಣವು ನ್ಯಾಯಾಲಯದಲ್ಲಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನ್ಯಾಯಾಲಯ ನೀಡುವ ತೀರ್ಪಿನಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.

ಸಭಾಪತಿಯಾಗಿ ಆಯ್ಕೆಯಾದ ತಕ್ಷಣ ನಾನು ಟ್ರಸ್ಟ್ ಹಾಗೂ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿಗೆ ಯಾರೋ ತಪ್ಪು ಮಾಹಿತಿ ಕೊಟ್ಟಿರಬಹುದು ಎಂದು ಬಸವರಾಜ ಹೊರಟ್ಟಿ ಹೇಳಿದರು.

ಸರ್ವೋದಯ ಶಿಕ್ಷಣ ಟ್ರಸ್ಟ್‌ನ ಆಡಳಿತದಲ್ಲಿ ಬಸವರಾಜ ಹೊರಟ್ಟಿ ಮಾಡಿರುವ ಅಕ್ರಮಗಳ ಕುರಿತು 2017ರ ಸೆ.28ರಂದು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸಲ್ಲಿಸಿದ ವಿಚಾರಣಾ ವರದಿಯನ್ನು ಜಾರಿಗೆ ತರುವುದು ಹಾಗೂ ಧಾರವಾಡ ಜಿಲ್ಲಾ ನ್ಯಾಯಾಲಯದ ಆದೇಶದ ಪ್ರಕಾರ ಟ್ರಸ್ಟಿನ ಆಡಳಿತವನ್ನು ಶ್ರೀಮಠದ ವ್ಯಾಪ್ತಿಗೆ ಒಳಪಡಿಸಲು ಕ್ರಮ ಕೈಗೊಳ್ಳುವಂತೆ ಅ.24ರಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ರಮೇಶ್ ಜಾರಕಿಹೊಳಿ ಪತ್ರ ಬರೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News