×
Ad

ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

Update: 2018-10-26 22:56 IST

ಉಡುಪಿ, ಅ.26: ಶಿವಮೊಗ್ಗ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ನ.3ರಂದು ನಡೆಯುವ ಮತದಾನಕ್ಕೆ ಪೂರ್ವಭಾವಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ನ.1ರ ಸಂಜೆ 6ಗಂಟೆಯಿಂದ ನ.3ರ ರಾತ್ರಿ 8ಗಂಟೆಯವರೆಗೆ ಸಿಆರ್‌ಪಿಸಿ ಕಲಂ 144ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಆದೇಶ ಹೊರಡಿಸಿದ್ದಾರೆ.

ಬೈಂದೂರು ವ್ಯಾಪ್ತಿಯಲ್ಲಿ ಮತದಾನವು ಶಾಂತಿಯುತ ಹಾಗೂ ಕಾನೂನು ಬದ್ಧವಾಗಿ ನಡೆಯಲು, ಯಾವುದೇ ಅಕ್ರಮ, ಅವ್ಯವಹಾರಗಳು ನಡೆಯದಂತೆ ತಡೆಯಲು ಮತದಾನಕ್ಕೆ 48ಗಂಟೆ ಮೊದಲು ಹಾಗೂ ಮತದಾನ ಮುಗಿದ 24ಗಂಟೆಗಳವರೆಗೆ ಈ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 246 ಮತಗಟ್ಟೆಗಳಿದ್ದು, ನ.3ರಂದು ಬೆಳಗ್ಗೆ 7:00ರಿಂದ ಸಂಜೆ 6:00ಗಂಟೆಯವರೆಗೆ ಮತದಾನ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News