ವೆಸ್ಟ್ ಇಂಡೀಸ್ ವಿರುದ್ಧದ ಟ್ವೆಂಟಿ-20 ಸರಣಿಗೆ ಟೀಮ್ ಇಂಡಿಯಾ ಪ್ರಕಟ; ಕೊಹ್ಲಿಗೆ ವಿಶ್ರಾಂತಿ

Update: 2018-10-26 18:37 GMT

ಹೊಸದಿಲ್ಲಿ, ಅ.26:  ವೆಸ್ಟ್ ಇಂಡೀಸ್ ವಿರುದ್ಧದ  ಮೂರು ಪಂದ್ಯಗಳ ಟ್ವೆಂಟಿ-20 ಸರಣಿಗೆ  ಭಾರತದ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ವಿರಾಟ್  ಕೊಹ್ಲಿ  ಮತ್ತು ವಿಕೆಟ್ ಕೀಪರ್ ಎಂ.ಎಸ್ ಧೋನಿಗೆ  ವಿಶ್ರಾಂತಿ ನೀಡಲಾಗಿದೆ.

ಉಪನಾಯಕ ರೋಹಿತ್ ಶರ್ಮಾ ತಂಡವನ್ನು ನಾಯಕರಾಗಿ ಮುನ್ನಡೆಸಲಿದ್ದಾರೆ. ತಂಡದ ವಿವರ ಇಂತಿವೆ. ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಲೋಕೇಶ್ ರಾಹುಲ್ , ದಿನೇಶ್ ಕಾರ್ತಿಕ್, ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೃನಾಲ್ ಪಾಂಡೆ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಾಲ್, ಕುಲ್ ದೀಪ್ ಯಾದವ್, ಭುವನೇಶ್ವರ ಕುಮಾರ್, ಜಸ್ ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್, ಉಮೇಶ್ ಯಾದವ್, ಶಾಬಾಝ್ ನದೀಮ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News