ಅರ್ಧ ಸುಟ್ಟ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ

Update: 2018-10-28 13:44 GMT

ಗುವಾಹಟಿ, ಅ.27: ಅಸ್ಸಾಂನ ಕೊಕ್ರಝಾರ್ ಜಿಲ್ಲೆಯ ಗೆಂಡ್ರಬೀಲ್ ಪ್ರದೇಶದಲ್ಲಿ ತರುಣಿಯೊಬ್ಬಳ ಮೃತದೇಹ ಅರ್ಧ ಸುಟ್ಟುಹಾಕಿದ ಸ್ಥಿತಿಯಲ್ಲಿ ಭತ್ತದ ಗದ್ದೆಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸುಮಾರು 18 ವರ್ಷದ ತರುಣಿ ಶುಕ್ರವಾರದಿಂದ ನಾಪತ್ತೆಯಾಗಿರುವುದಾಗಿ ದೂರು ದಾಖಲಾಗಿತ್ತು. ಶನಿವಾರ ರಾತ್ರಿ ಆಕೆಯ ಮೃತದೇಹ ಭತ್ತದ ಗದ್ದೆಯಲ್ಲಿ ಪತ್ತೆಯಾಗಿದೆ. ಕೈಯನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿದ್ದು ತರುಣಿಯನ್ನು ಅತ್ಯಾಚಾರ ನಡೆಸಿ ಸುಟ್ಟು ಹಾಕಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ . ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ . ಆರೋಪಿಗಳ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News