×
Ad

ಮಂಡ್ಯ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Update: 2018-10-28 23:51 IST

ಮಂಡ್ಯ, ಅ.28: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ತಾಲೂಕಿನ ಹುಚ್ಚಲಗೆರೆ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ಮತ್ತೊಬ್ಬ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾರಾಯಣ ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಕೃಷಿ ಚಟುವಟಿಕೆ ಹಾಗೂ ಮಗಳ ಮದುವೆಗಾಗಿ ಸುಮಾರು 5 ಲಕ್ಷ ರೂ. ಸಾಲಮಾಡಿದ್ದರು ಎಂದು ತಿಳಿದು ಬಂದಿದೆ.

ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕುಟುಂಬದವರು ದೂರು ನೀಡಿದ್ದು, ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News