ಹಿರಿಯ ಚಿತ್ರ ನಿರ್ದೇಶಕ ಎಂಎಸ್ ರಾಜಶೇಖರ್ ನಿಧನ

Update: 2018-10-29 16:48 GMT

ಬೆಂಗಳೂರು, ಅ.29: ಹಿರಿಯ ಸಿನೆಮಾ ನಿರ್ದೇಶಕ ಎಂ.ಎಸ್.ರಾಜಶೇಖರ್(75) ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದರು. ಪತ್ನಿ, ಪುತ್ತಿ, ಪುತ್ರನ್ನು ಅಗಲಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆಯುತ್ತಿದ್ದ ರಾಜಶೇಖರ್ ಅವರು ಸೋಮವಾರ ನಿಧನ ಹೊಂದಿದರು ಎಂದು ತಿಳಿದುಬಂದಿದೆ.

ಹಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಾಜಶೇಖರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸೃಜನಶೀಲ ನಿರ್ದೇಶಕ ಎಂದೇ ಖ್ಯಾತಿ ಪಡೆದಿರುವ ಅವರು 1985ರಲ್ಲಿ ರಾಜ್‌ಕುಮಾರ್ ಅಭಿನಯದ ಧ್ರುವತಾರೆ ಚಿತ್ರದ ಮೂಲಕ ನಿರ್ದೇಶಕರಾಗಿದ್ದರು. ಆ ನಂತರ ಅನುರಾಗ ಅರಳಿತು, ನಂಜುಂಡಿ ಕಲ್ಯಾಣ, ಗಜಪತಿ ಗರ್ವಭಂಗ, ರಥಸಪ್ತಮಿ, ಮನಮೆಚ್ಚಿದ ಹುಡುಗಿ ಸೇರಿದಂತೆ ಸುಮಾರು ನಲವತ್ತು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.

ಮಂಗಳವಾರ ನಾಗರಬಾವಿ ಸಮೀಪದ ಸುಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News