ನ.1: ಶಕ್ತಿ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ
Update: 2018-10-30 18:11 IST
ಮಂಗಳೂರು, ಅ.30:ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪಪೂ ಕಾಲೇಜು ವತಿಯಿಂದ ನ.1ರಂದು ಬೆಳಗ್ಗೆ 9 ಗಂಟೆಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕನ್ನಡ ನಾಡು, ನುಡಿ-ಅಂದು ಇಂದು’ ಉಪನ್ಯಾಸ ಕಾರ್ಯಕ್ರಮವು ಶಕ್ತಿ ಶಾಲೆಯಲ್ಲಿ ನಡೆಯಲಿದೆ.
ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮೀನಾಕ್ಷಿ ರಾಮಚಂದ್ರ ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಪಿಯುಷ್ ರಾಡ್ರಿಗಸ್, ಅನುಪಮಾ ಮಹಿಳಾ ಮಾಸಿಕದ ಪ್ರಧಾನ ಸಂಪಾದಕಿ ಶಹನಾಝ್ ಎಂ. ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.