ನ.1 ರಂದು ಬಡಗಬೆಟ್ಟು ಸೊಸೈಟಿ ಅಂಬಾಗಿಲು ಶಾಖೆ ಸ್ಥಳಾಂತರ
Update: 2018-10-30 19:18 IST
ಉಡುಪಿ, ಅ.30: ಅಂಬಾಗಿಲಿನ ಜಯರಾಂ ಕಾಂಪ್ಲೆಕ್ಸ್‌ನಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಅಂಬಾಗಿಲು ಶಾಖೆಯು ಜಯಶ್ಯಾಂ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ರುವ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಇದರ ಉದ್ಘಾಟನೆಯು ನ.1 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಕಚೇರಿಯನ್ನು ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚಂದ್ರ ಪ್ರತಿಮಾ, ಜಯಶ್ಯಾಂ ಕಟ್ಟಡದ ಮಾಲಕ ಉಷಾ ಜೆ.ಶೆಟ್ಟಿ, ಭಾಗವಹಿಸಲಿರು ವರು ಎಂದು ಸಂಘದ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.