×
Ad

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

Update: 2018-10-30 21:26 IST

ಮಂಗಳೂರು, ಅ.30: ನಗರದ ಶಾಂತಿನಗರದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬಜ್ಪೆ ಸಮೀಪದ ಮರವೂರು ಡ್ಯಾಂ ಬಳಿ ಮಂಗಳವಾರ ಪತ್ತೆಯಾಗಿದೆ.

ಶಾಂತಿನಗರ ನಿವಾಸಿ ಮುಹಮ್ಮದ್ ಅಶ್ಫಾಕ್ (27) ಮೃತರು ಎಂದು ಗುರುತಿಸಲಾಗಿದೆ.

ಅ.29ರಂದು ಮಧ್ಯಾಹ್ನ 3 ಗಂಟೆಗೆ ಅಶ್ಫಾಕ್ ಶಾಂತಿ ನಗರದ ತನ್ನ ಮನೆಯಿಂದ ಊಟ ಮುಗಿಸಿ ಕಾವೂರಿಗೆ ಹೋಗಿ ಬರುವುದಾಗಿ ಮನೆಯಿಂದ ಹೋದವರು ವಾಪಸಾಗದೇ ನಾಪತ್ತೆಯಾಗಿದ್ದರು. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮರವೂರು ಡ್ಯಾಂ ಬಳಿ ಶವ ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದ್ದು, ಬಳಿಕ ಬಜ್ಪೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ.

ಯುವಕನ ಸಾವಿನ ಬಗ್ಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ಇದೊಂದು ಆತ್ಮಹತ್ಯೆ ಇರಬಹುದು ಎಂದು ಮೃತ ವ್ಯಕ್ತಿಯ ಕುಟುಂಬದ ಮೂಲಗಳು ಶಂಕೆ ವ್ಯಕ್ತಪಡಿಸಿವೆ. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News