×
Ad

ಅಕ್ರಮ ಚಿನ್ನ ಸಾಗಾಟ ಆರೋಪ ಪ್ರಕರಣ: ಕಸ್ಟಮ್ಸ್ ಇಲಾಖೆಯ ಸಿಬ್ಬಂದಿ ಬಂಧನ

Update: 2018-10-30 22:28 IST

ಮಂಗಳೂರು, ಅ.30: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ವಶ ಪ್ರಕರಣಕ್ಕೆ ಸಂಬಂಧಿಸಿ, ಕಸ್ಟಮ್ಸ್ ಇಲಾಖೆಯ ಸಿಬ್ಬಂದಿಯನ್ನು ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ಕಸ್ಟಮ್ಸ್ ಇಲಾಖೆಯ ಸಿಬ್ಬಂದಿ ಅಶ್ವಿನ್ ಎಂಬಾತ ಬಂಧಿತ ಆರೋಪಿ.

ಸೆ.20ರಂದು ದುಬೈಯಿಂದ ಸ್ಪೈಸ್‌ಜೆಟ್ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ಮುಳ್ಳೇರಿಯಾ ನಿವಾಸಿ ನಿಝಾರ್ ಖಾದರ್ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದುದು ಪತ್ತೆಯಾಗಿತ್ತು. ಸುಮಾರು 47 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದರು. ಈ ಸಂದರ್ಭ ಆತನಿಗೆ ಚಿನ್ನ ಸಾಗಿಸಲು ಸಹಾಯ ಮಾಡಿದ್ದ ಆರೋಪದ ಮೇರೆಗೆ ವಿಮಾನ ನಿಲ್ದಾಣದ ಅಧಿಕಾರಿ ಶ್ರೀಕಾಂತ್ ಎಂಬವರನ್ನು ಬಂಧಿಸಿ, ಅವರ ಮನೆಯಿಂದ ಸುಮಾರು 25 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ಬಗ್ಗೆ ತನಿಖೆ ಕೈಗೊಂಡಿದ್ದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಈ ಅಕ್ರಮ ಸಾಗಣೆ ಚಿನ್ನವನ್ನು ಖರೀದಿಸುತ್ತಿದ್ದ ಅಕ್ಬರ್ ಸಿದ್ಧಿಕ್ ಎಂಬಾತನನ್ನು ಬಂಧಿಸಿದ್ದರು. ಈತನನ್ನು ವಿಚಾರಣೆ ಮಾಡುತ್ತಿದ್ದ ಸಂದರ್ಭ ಕಸ್ಟಮ್ಸ್ ಸಿಬ್ಬಂದಿ ಅಶ್ವಿನ್ ಕೂಡ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ತಿಳಿಸಿದ್ದನು. ಈ ಹಿನ್ನೆಲೆಯಲ್ಲಿ ಅಶ್ವಿನ್ ಬಂಧನ ಕಾರ್ಯಾಚರಣೆ ನಡೆಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News