ಕೆರೆ ನೀರು ಬಳಸುವ ವಿಚಾರದಲ್ಲಿ ಹಲ್ಲೆ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ
ಪುತ್ತೂರು, ಅ. 31: ಕೆರೆ ನೀರು ಬಳಸುವ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಳ್ಯ ಅಮರಪಡ್ನೂರು ಗ್ರಾಮದ ಚೊಕ್ಕಾಡಿ ಮೂಡೆಕಲ್ಲು ಸೋಮಶೇಖರ್ ಎಂಬಾತನಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2017ರ ಮಾ.30ರಂದು ಅಮರಪಡ್ನೂರು ಗ್ರಾಮದ ಮೂಡೆಕಲ್ಲು ಎಂಬಲ್ಲಿ ಕೆರೆಯ ನೀರು ಬಳಸುವ ವಿಚಾರದಲ್ಲಿ ಚೊಕ್ಕಾಡಿ ಮೂಡೆಕಲ್ಲು ಕೃಷ್ಣಪ್ಪ ನಾಯ್ಕ ಎಂಬವರಿಗೆ ಸ್ಥಳೀಯ ಸೋಮಶೇಖರ್ ಕತ್ತಿಯಿಂದ ಕಡಿದು ಗಾಯಗೊಳಿಸಿದ್ದು, ಘಟನೆಗೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಶಿವಣ್ಣ ಅವರು ಸೋಮಶೇಖರ್ ಗೆ 1 ವರ್ಷ ಜೈಲು ಶಿಕ್ಷೆ ಮತ್ತು ರೂ. 5ಸಾವಿರ ದಂಡ ವಿಧಿಸಿದ್ದು, ದಂಡ ತೆರಳು ತಪ್ಪಿದ್ದಲ್ಲಿ 3 ತಿಂಗಳು ಸಾಧ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕ ಉದಯ ಕುಮಾರ್ ವಾದಿಸಿದರು.