ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Update: 2018-10-31 15:47 GMT

ಬೆಂಗಳೂರು, ಅ.31: 2018-19ನೆ ಸಾಲಿನಲ್ಲಿ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಶೇ.60 ರಿಂದ 74.99 ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 7 ಸಾವಿರ ರೂ. ಹಾಗೂ ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15ಸಾವಿರ ರೂ.ಗಳ ಪ್ರೋತ್ಸಾಹ ಧನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಎಸೆಸ್ಸೆಲ್ಸಿ ನೋಂದಣಿ ಸಂಖ್ಯೆ, ಆಧಾರ್ ಕಾರ್ಡ್‌ನಲ್ಲಿರುವಂತೆ ನಿಮ್ಮ ಹೆಸರು ಮತ್ತು ಆಧಾರ್ ಸಂಖ್ಯೆ. ಜಾತಿ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ. ಅರ್ಜಿದಾರರ ಅಳತೆಯ ಫೋಟೋ, ಸ್ಕ್ಯಾನ್ ಮಾಡಲಾದ ಎಸೆಸ್ಸೆಲ್ಸಿ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ವಿವರಗಳೊಂದಿಗೆ ಜಂಟಿ ನಿರ್ದೇಶಕರ ಕಚೇರಿ, ಬೆಂಗಳೂರು ನಗರ ಜಿಲ್ಲೆ, 4ನೆ ಮುಖ್ಯರಸ್ತೆ, 16ನೆ ಅಡ್ಡರಸ್ತೆ, ಸಂಪಂಗಿರಾಮನಗರ ಪೊಲೀಸ್ ಠಾಣೆ ಎದರು, ಸಂಪಂಗಿರಾಮನಗರ, ಬೆಂ-27ಕ್ಕೆ ನ.15ರೊಳಗೆ ಅರ್ಜಿ ಸಲ್ಲಿಸಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News