ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2018-10-31 15:49 GMT

ಬೆಂಗಳೂರು, ಅ.31: ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಿದೆ.

ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಪಟ್ಟ ಬಿಎಫ್‌ಎ, ಎಂಎಫ್‌ಎ ಚಿತ್ರಕಲಾ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಚಿತ್ರಕಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕರ್ನಾಟಕದವರಾಗಿದ್ದು, ವಯೋಮಿತಿ 20 ರಿಂದ 25 ವರ್ಷ ಒಳಗಿರಬೇಕು.

ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ಪೂರ್ಣ ವಿವರಗಳೊಂದಿಗೆ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಎರಡು ಭಾವಚಿತ್ರ ಹಾಗ ಎರಡು ಚಿತ್ರಕಲಾಕೃತಿಗಳ ಛಾಯಾಚಿತ್ರಗಳು ಸೇರಿದಂತೆ ಈ ಹಿಂದೆ ದ್ಯಾರ್ಥಿ ವೇತನ ಪಡೆದಿಲ್ಲವೆಂದು ಇದೇ ಮೊದಲ ಸಲವೆಂದು ಸಂಬಂಧಪಟ್ಟ ಕಲಾವಿದ್ಯಾಲಯದ ಮುಖ್ಯಸ್ಥರ/ಪ್ರಾಚಾರ್ಯರ ದೃಢೀಕರಣದೊಂದಿಗೆ ನ.30ರ ಒಳಗಾಗಿ ಅಕಾಡೆಮಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿಯ ಕಚೇರಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂ-02 ಇವರಿಗೆ ತಲುಪಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳಿಗೆ ದೂ-080-22480297 ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News