ನ.1: ರಾಜ್ಯೋತ್ಸವ ಪ್ರಯುಕ್ತ ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ
ಮಂಗಳೂರು, ಅ.31: ಜಿಲ್ಲಾ ಕಸಾಪ, ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ರಾಜ್ಯೋತ್ಸವದ ಅಂಗವಾಗಿ ರಾಜ್ಯೋತ್ಸವ ಸಂದೇಶ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ನಗರದ ಪುರಭವನದಲ್ಲಿ ನ.1ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಬ್ಯಾಂಡ್‌ನೊಂದಿಗೆ ಸಮಾರಂಭ ಆರಂಭಗೊಳ್ಳಲಿದ್ದು, ಹಿರಿಯ ಸಾಹಿತಿ ಕೆ.ಟಿ.ಗಟ್ಟಿ ಚಾಲನೆ ನೀಡಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಹೊರನಾಡ (ಮುಂಬೈ/ಕಾಸರಗೋಡು) ಮತ್ತು ಸ್ಥಳೀಯ ಬಾಲಪ್ರತಿಭೆಗಳಿಗೆ ಸಾಧಕ ಅಭಿನಂದನೆ ಪುರಸ್ಕಾರ ನೀಡಿ ಗೌರವಿಸಲಾಗುವುದು.
ರಾಜ್ಯೋತ್ಸವ ಕವಿಗೋಷ್ಠಿ:
‘ವಾರ್ತಾಭಾರತಿ’ ದಿನಪತ್ರಿಕೆಯ ಮಂಗಳೂರು ಬ್ಯುರೋ ಮುಖ್ಯಸ್ಥ ಪುಷ್ಪರಾಜ್ ಬಿ.ಎನ್. ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದ್ದು, ಮುಮ್ತಾಝ್ ಬೇಗಂ, ನೀರಜಾ ಓಕುಡ, ವಿಶ್ವನಾಥ ನೇರಳಕಟ್ಟೆ, ಹರಿಣಾಕ್ಷಿ ಕೆ. ಉಪ್ಪಿನಂಗಡಿ, ಜಯರಾಮ ಡೆಂಬಳ, ಸುಮಂಗಲಾ ಗಿರಿಧರ ರಾವ್ ತಮ್ಮ ಸ್ವರಚಿತ ಕವನ ಗಳನ್ನು ವಾಚಿಸುವರು.
ಆ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ವಿವಿಧ ತಂಡಗಳಿಂದ ಸಮೂಹ ನೃತ್ಯ, ತಾಳಮದ್ದಳೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.