ಮರಳು ದಿಬ್ಬ ತೆರವುಗೊಳಿಸುವ ಅರ್ಜಿದಾರರ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಸೂಚನೆ
Update: 2018-10-31 22:15 IST
ಉಡುಪಿ, ಅ.31: ಜಿಲ್ಲೆಯ ಉಡುಪಿ ಹಾಗೂ ಬ್ರಹ್ಮಾವರ ತಾಲೂಕಿನಲ್ಲಿ ಗುರುತಿಸಿರುವ ಮರಳು ದಿಬ್ಬಗಳನ್ನು ತೆರವುಗೊಳಿಸಲು ಅರ್ಜಿ ಸಲ್ಲಿಸಿರುವ ಪರವಾನಿಗೆದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.
ಅರ್ಜಿದಾರರ ಪಟ್ಟಿಯನ್ನು ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ ಇವರ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಇದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ 3 ದಿನಗಳೊಳಗೆ ಹಿರಿಯ ಭೂ ವಿಜ್ಞಾನಿಗಳ ಕಚೇರಿಗೆ ಸಲ್ಲಿಸುವಂತೆ ಉಡುಪಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.