×
Ad

ಸರ್ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2018-10-31 22:17 IST

ಉಡುಪಿ, ಅ.31: 2017-18ನೇ ಸಾಲಿನಿಂದ ಕರ್ನಾಟಕದಲ್ಲಿ ಅತ್ಯುತ್ತಮ ವಾಗಿ ಕಾರ್ಯನಿರ್ವಹಿಸುವ ಸೂಕ್ಷ್ಮ, ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಘಟಕಗಳಿಗೆ ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿಯನ್ನು ನೀಡಲಾಗುತಿದ್ದು, ಇದಕ್ಕಾಗಿ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸ www.vtpckarnataka.gov.in  ಗೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸ ಬಹುದು. ಅಥವಾ ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ ಇಲ್ಲಿಂದ ಅರ್ಜಿ ಪಡೆದು, ಸಂಬಂಧಪಟ್ಟ ದಾಖಲೆಗಳೊಂದಿಗೆ ನ.7ರೊಳಗೆ ಕಛೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ: 0820-2575650 , 2575655ನ್ನು ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News