ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ
ಮಂಗಳೂರು, ನ.1: ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಇಂದು ಬೆಳಗ್ಗೆ ಆಚರಿಸಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ಕೂಲ್‌ನ ಪ್ರಾಂಶುಪಾಲ ವಂ. ರಾಬರ್ಟ್ ಡಿಸೋಜ, ಕನ್ನಡ ನಾಡು, ನುಡಿ, ಕಲೆ, ಸಂಸ್ಕೃತಿಯನ್ನು ಗೌರವಿಸಿ, ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ವಿದ್ಯಾರ್ಥಿಗಳು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಹಾಡುಗಾರಿಕೆ, ಏಕಪಾತ್ರಾಭಿನಯ ಆಯೋಜಿಸಲಾಗಿತ್ತು. ವೀರಗಾಸೆ ಮತ್ತು ಜನಪದ ನೃತ್ಯವನ್ನು ಮಕ್ಕಳು ಪ್ರಸ್ತುತಪಡಿಸಿದರು.
ವಿವಿಧ ಸ್ಪರ್ಧಾ ವಿಜೇತರಿಗೆ ಇದೇ ಸಂದರ್ಭ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಉಪಪ್ರಾಂಶುಪಾಲೆ ಬೆಲಿಟಾ ಮಸ್ಕರೇನ್ಹಸ್ ಉಪಸ್ಥಿತರಿದ್ದರು.
ಶಾಲೆಯ ಶಿಕ್ಷಕರಾದ ರತ್ನಾಕರ ಎಸ್. ಆಚಾರ್ಯ, ನೊಯ್ಲಿನ್ ಪಾಯ್ಸಿ, ರೇಖಾ ನವೀನ್, ಸೌಮ್ಯಾ ಹಾಗೂ ದೀಪಿಕಾ ಕಾರ್ಯಕ್ರಮವನ್ನು ಸಂಯೋಜಿಸಿದರು.
ಐವನ್ ಮಸ್ಕರೇನ್ಹಸ್, ನಂದಿನಿ, ವಿವಿಟಾ ಡಿಸೋಜ ಸಹಕರಿಸಿದರು.
ವಿದ್ಯಾರ್ಥಿಗಳಾದ ಆರಾಧನಾ ಮತ್ತು ಕಾಮ್ಯ ದಯಾನಿಧಿ ಕಾರ್ಯಕ್ರಮ ನಿರೂಪಿಸಿದರು. ಚಂದನಾ ರಾಜ್ಯೋತ್ಸವದ ಪ್ರಾಮುಖ್ಯತೆಯನ್ನು ವಿವರಿಸಿದರು. ಸುಶಾಂತ್ ರಾಶ್ರೀ ವಂದಿಸಿದರು.