ತಲಪಾಡಿ: ಫಲಾಹ್ ವಿದ್ಯಾಸಂಸ್ಥೆಯಲ್ಲಿ ರಾಜ್ಯೋತ್ಸವ
Update: 2018-11-01 17:53 IST
ಮಂಗಳೂರು, ನ. 1: ತಲಪಾಡಿಯ ಫಲಾಹ್ ವಿದ್ಯಾಸಂಸ್ಥೆಯಲ್ಲಿ ನಡೆದ ರಾಜ್ಯೋತ್ಸವದಲ್ಲಿ ವಿದ್ಯಾರ್ಥಿಗಳಾದ ರಾಲ್ ಅಕ್ತರ್, ಸೈಬುನ್ನೀಸಾ, ರಚನ್, ಫಝೀನಾ, ಹಝೀನಾ ಡಿ.ಎಚ್. ಸಂದೇಶ ನೀಡಿದರು.
ಈ ಸಂದರ್ಭ ಸಂಸ್ಥೆಯ ಅಧ್ಯಕ್ಷ ಹಾಜಿ ಯು.ಬಿ. ಮುಹಮ್ಮದ್, ಕಾರ್ಯದರ್ಶಿ ಬಶೀರ್ ತಲಪಾಡಿ, ಕೋಶಾಧಿಕಾರಿ ಇಸ್ಮಾಯೀಲ್ ನಾಗತೋಟ, ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೈನ್, ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯಶಿಕ್ಷಕ ಮುಹಮ್ಮದ್ ರಫೀಕ್, ಆಂಗ್ಲ ಮಾಧ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಆಯಿಶಾ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿದ್ಯಾ ಡಿಸೋಜ ಉಪಸ್ಥಿತರಿದ್ದರು.
ಶಿಕ್ಷಕಿ ರೋಹಿಣಿ ಸ್ವಾಗತಿಸಿದರು. ಚಂದ್ರಕಲಾ ಎಂ. ಕಾರ್ಯಕ್ರಮ ನಿರೂಪಿಸಿದರು.