‘ಕಾವ್ಯ ಕಮ್ಮಟ’ಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ

Update: 2018-11-01 15:16 GMT

ಬೆಂಗಳೂರು, ನ. 1: ಕರ್ನಾಟಕ ಸಾಹಿತ್ಯ ಅಕಾಡೆಮಿ ಡಿಸೆಂಬರ್ 2ನೇ ವಾರದಲ್ಲಿ ರಾಜ್ಯ ಮಟ್ಟದ ಐದು ದಿನಗಳ ವಸತಿ ಸಹಿತ ಕಾವ್ಯ ಕಮ್ಮಟವನ್ನು ರಾಮನಗರ ಜಿಲ್ಲೆಯ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನ.15ರಂದು ಕೊನೆಯ ದಿನವಾಗಿರುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡಮಿ ವೆಬ್‌ಸೈಟ್ http://karnataka sahithyaacademy.org ನಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ.

20ರಿಂದ 45ರ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು. ಈಗಾಗಲೇ ತಮ್ಮ ಬಿಡಿ ಕವನ ಅಥವಾ ಕವನ ಸಂಕಲನ ಪ್ರಕಟಗೊಂಡಿದ್ದರೆ ಅಕಾಡಮಿ ಗಮನಕ್ಕೆ ತರುವುದು, ವಯಸ್ಸಿಗೆ ಸಂಬಂಧಿಸಿದಂತೆ ಎಸೆಸೆಲ್ಸಿ ಅಂಕಪಟ್ಟಿ ಅಥವಾ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರ ಲಗತ್ತಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಐದು ದಿನಗಳು ಶಿಬಿರದಲ್ಲಿ ವಾಸ್ತವ್ಯ ಮಾಡಬೇಕು. ಅರ್ಜಿಯನ್ನೊಳಗೊಂಡ ಲಕೋಟೆಯ ಮೇಲ್ಬಾಗದಲ್ಲಿ ಕಡ್ಡಾಯವಾಗಿ ಕಾವ್ಯ ಕಮ್ಮಟಕ್ಕೆ ಅರ್ಜಿ ಎಂದು ನಮೋದಿಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಬಿರಕ್ಕೆ ಬಂದು-ಹೋಗಲು ಬಸ್ ದರ ಹಾಗೂ ಐದು ದಿನ ಊಟ, ಉಪಚಾರ ಹಾಗೂ ವಾಸ್ತವ್ಯ ವ್ಯವಸ್ಥೆ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಕಾಡೆಮಿ ವೆಬ್‌ಸೈಟ್‌ನಿಂದ ಪಡೆದುಕೊಳ್ಳಬಹುದು. ಆಯ್ಕೆ ಪಟ್ಟಿಯನ್ನು ನವೆಂಬರ್ ಕೊನೆವಾರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಅರ್ಜಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡಮಿ, ಕನ್ನಡ ಭವನ, ಜೆಸಿ ರಸ್ತೆ, ಬೆಂಗಳೂರು-560002, ದೂರವಾಣಿ ಸಂಖ್ಯೆ-080-2221 1730, 2210 6460 ಸಂಪರ್ಕಿಸಲು ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News