×
Ad

ವಾರದ ರಜೆ ಕಡ್ಡಾಯ: ಡಿಸಿಪಿ ಅಣ್ಣಾಮಲೈ ಆದೇಶ

Update: 2018-11-01 22:58 IST

ಬೆಂಗಳೂರು, ನ.1: ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಪೊಲೀಸ್ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ವಾರದ ರಜೆ ನೀಡಬೇಕೆಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅಣ್ಣಾಮಲೈ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದ ಎಲ್ಲ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮತ್ತು ಪೊಲೀಸ್ ಇನ್‌ಸ್ಪೆಕ್ಟರ್‌ಗಳಿಗೆ ಸೂಚನೆ ನೀಡಿದ್ದು, ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಸಿ, ಎಸ್ಸೈ ಸಿಬ್ಬಂದಗಳಿಗೆ ವಾರದ ರಜೆ ಕಡ್ಡಾಯವಾಗಿ ನೀಡಬೇಕು. ಹಾಗೂ ಒಂದು ವರ್ಷದಲ್ಲಿ 15 ದಿನ ಸಾಂದರ್ಭಿಕ ರಜೆ , 15ದಿನಗಳ ಗಳಿಕೆ ರಜೆಯನ್ನು ಕಡ್ಡಾಯವಾಗಿ ಮಂಜೂರು ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಗಳಿಕೆ ರಜೆ 15ದಿನಕ್ಕಿಂತ ಹೆಚ್ಚು ಬೇಕಿದ್ದಲ್ಲಿ, ತಮ್ಮನ್ನು ಸಂಪರ್ಕಿಸುವಂತೆ ತಮ್ಮ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳ ಕೆಲಸದ ಒತ್ತಡ ತಗ್ಗಿಸುವ ಮೂಲಕ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ರಜೆಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ವಿಭಾಗಕ್ಕೆ ಸಂಬಂಧಿಸಿದ ಎಲ್ಲ ಪೊಲೀಸ್ ಠಾಣೆಗಳ ಸೂಚನಾ ಫಲಕದಲ್ಲಿ ಹಾಕುವಂತೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News