×
Ad

ಚಾಂಪಿಯನ್ಸ್...

Update: 2018-11-01 23:48 IST

ಎಡಗೈ ಸ್ಪಿನ್ನರ್ ರವೀಂದ್ರ ಜಡೇಜರ ಸ್ಪಿನ್ ಮೋಡಿ ಹಾಗೂ ಉಪ ನಾಯಕ ರೋಹಿತ್ ಶರ್ಮಾ ಅವರ 37ನೇ ಅರ್ಧಶತಕದ ಕೊಡುಗೆ ನೆರವಿನಿಂದ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧದ 5ನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು 9 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನ ಮೂಲಕ ವಿರಾಟ್ ಕೊಹ್ಲಿ ಪಡೆ 5 ಪಂದ್ಯಗಳ ಏಕದಿನ ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಸ್ವದೇಶದಲ್ಲಿ ಸತತ ಆರನೇ ಏಕದಿನ ಸರಣಿ ಗೆದ್ದ ಸಾಧನೆ ಮಾಡಿದೆ. ಕೊಹ್ಲಿ ತವರಿನಲ್ಲಿ ಸತತ 6 ಸರಣಿ ಜಯಿಸಿದ ಭಾರತದ ಮೊದಲ ನಾಯಕ ಎನಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor