ಇರಾ: ಕನ್ನಡ ರಾಜ್ಯೋತ್ಸವ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Update: 2018-11-02 08:49 GMT

ಕೊಣಾಜೆ, ನ.2: ಇರಾ ನಡುಕೆಂಜಿಲದ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವು ಗುರುವಾರ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಸಂಜೀವ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಇರಾ ಗ್ರಾಪಂ ಅಧ್ಯಕ್ಷ ಅಬ್ದುರ್ರಝಾಕ್ ಕುಕ್ಕಾಜೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಇರಾ ಗ್ರಾಪಂ ಸದಸ್ಯರಾದ ಸುಧಾಕರ ಕೆ.ಟಿ., ತುಳಸಿ ಪೂಜಾರಿ, ಸವಿತಾ, ತಾಪಂ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಎಸ್‌ಡಿಎಂಸಿ ಉಪಾಧ್ಯಕ್ಷ ಮಮತಾ, ಶಿಕ್ಷಣ ಸಂಯೋಜಕ ಸುಶೀಲಾ, ಸಮೂಹ ಸಂಪನ್ಮೂಲ ವ್ಯಕ್ತಿ ಆಶಾ ಮೊದಲಾವರು ಉಪಸ್ಥಿತರಿದ್ದರು.

ಇದೇ ಸಂದರ್ಭ ಕಳೆದ 20 ವರ್ಷಗಳಿಂದ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುರೇಶ್ ರಾವ್ ಪಿ. ಅವರನ್ನು ಸನ್ಮಾನಿಸಲಾಯಿತು.

ಬಳಿಕ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಮುಖ್ಯ ಶಿಕ್ಷಕ ಹರೀಶ್ ಸ್ವಾಗತಿಸಿದರು. ಜಯಶ್ರೀ ವಂದಿಸಿದರು. ಶಿಕ್ಷಕಿ ಲ್ಯಾನ್ಸಿ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News