ರಾಜ್ಯ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಪುಷ್ಪಾ ಅಮರ್‌ನಾಥ್ ನೇಮಕ
Update: 2018-11-02 17:56 IST
ಬೆಂಗಳೂರು, ನ.2: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ಡಾ.ಬಿ.ಪುಷ್ಪಾ ಅಮರ್‌ನಾಥ್‌ರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಪುಷ್ಪಾ ಅಮರ್‌ನಾಥ್ ಅವರನ್ನು ನೇಮಕ ಮಾಡಲಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಅವಧಿಗೆ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆಯಾಗಿ ಮುಂದುವರೆಯುವ ಬಯಕೆ ಹೊಂದಿದ್ದರು. ಅಲ್ಲದೆ, ತಮ್ಮ ಮಟ್ಟದಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದರು.