ಬಂಟ್ವಾಳ ತೌಹೀದ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
Update: 2018-11-02 18:03 IST
ಬಂಟ್ವಾಳ, ನ. 2: ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಶಾಲಾ ಅಧ್ಯಕ್ಷ ಹಾಜಿ ಬಿ.ಎ ಸುಲೈಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿ ಮುಹಮ್ಮದ್ ಫಾಝಿಲ್ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಕನ್ನಡ ನಾಡಿನ ಸೊಬಗನ್ನು ನೃತ್ಯರೂಪಕದ ಮೂಲಕ ಪ್ರಸ್ತುತಪಡಿಸಿ, ರಾಜೋತ್ಸವ ಗೀತೆಯನ್ನು ಹಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಇಸ್ಮಾಯಿಲ್, ಶಬೀರ್ ಅಹ್ಮದ್, ಪಿ.ಟಿ.ಎ ಅಧ್ಯಕ್ಷ ಮುಹಮ್ಮದ್ ಹನೀಫ್, ಶಾಲಾ ಮುಖ್ಯ ಶಿಕ್ಷಕಿ ಮೆಟಿಲ್ಡಾ ಡಿಕೋಸ್ತಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಮಮತಾ ಸುವರ್ಣ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಅಫ್ತಾಬ್ ಸ್ವಾಗತಿಸಿ, ಮುಹಮ್ಮದ್ ಶಾಝಿಲ್ ವಂದಿಸಿ, ಸಫ್ನಾಝ್ ನಿರೂಪಿಸಿದರು.