ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಾಲ್ವರು ಪ್ರಮಾಣ ವಚನ ಸ್ವೀಕಾರ

Update: 2018-11-02 15:49 GMT

ಹೊಸದಿಲ್ಲಿ, ನ. 1: ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ, ಆರ್. ಸುಭಾಶ್ ರೆಡ್ಡಿ, ಎಂ.ಆರ್. ಶಾ ಹಾಗೂ ಅಜಯ್ ರಸ್ತೋಗಿ ಅವರು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಸುಪ್ರೀಂ ಕೋರ್ಟ್‌ನಲ್ಲಿ ಈಗ ಒಟ್ಟು 28 ನ್ಯಾಯಾಧೀಶರ ಬಲ ಇದೆ.

ಸುಪ್ರೀಂ ಕೋರ್ಟ್ ನಂ. 1ನಲ್ಲಿ ಬೆಳಗ್ಗೆ 10.30ಕ್ಕೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ರಂಜನೊ ಗೊಗೋಯಿ ನಾಲ್ಕು ಮಂದಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿವಿಧ ಉಚ್ಚ ನ್ಯಾಯಾಲಯಗಳ ಮುಖ್ಯ ನ್ಯಾಯಮೂರ್ತಿ ಗಳಾಗಿದ್ದ ಗುಪ್ತಾ, ರೆಡ್ಡಿ, ಶಾ ಹಾಗೂ ರಸ್ತೋಗಿ ಅವರಿಗೆ ಬಡ್ತಿ ನೀಡಲು ಸುಪ್ರೀಂ ಕೋರ್ಟ್ ಕೊಲೀಜಿಯಂನ ಶಿಫಾರಸಿಗೆ ರಾಷ್ಟ್ರಪತಿ ಅವರು ಗುರುವಾರ ಅನುಮತಿ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News