ಬವೇರಿಯಾ ಪ್ರತಿನಿಧಿಗಳಿಂದ ಉಪ ಮುಖ್ಯಮಂತ್ರಿ ಪರಮೇಶ್ವರ್ ಭೇಟಿ

Update: 2018-11-02 16:28 GMT

ಬೆಂಗಳೂರು, ನ. 2: ಬವೇರಿಯಾ ಹಾಗೂ ಕರ್ನಾಟಕದ ರಾಜಕೀಯ ಮತ್ತು ಆಡಳಿತ ವ್ಯವಸ್ಥೆ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರುವ ಯುವಕರು ಮುಂದೆ ಬಂದರೆ ಅದಕ್ಕೆ ಅವಕಾಶ ನೀಡಲು ಸಿದ್ಧವಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಬವೇರಿಯಾ ಪ್ರತಿನಿಧಿಗಳು ಭೇಟಿ ಮಾಡಿ ಆ ದೇಶ ಹಾಗೂ ಕರ್ನಾಟಕ ರಾಜ್ಯದಲ್ಲಿನ ರಾಜಕೀಯ ವ್ಯವಸ್ಥೆಯ ಬಗ್ಗೆ ಸಮಾಲೋಚನೆ ನಡೆಸಿದರು.

ಬವೇರಿಯಾ ರಾಜಕೀಯದ ಬಗ್ಗೆ ಈ ರಾಜ್ಯದ ಯುವಕರು ತಿಳಿದುಕೊಂಡರೆ ಹೆಚ್ಚು ಉಪಯುಕ್ತ. ಹಾಗೆಯೇ ಬವೇರಿಯಾ ಯುವಕರು ಇಲ್ಲಿಯ ವಿಚಾರ ತಿಳಿದುಕೊಳ್ಳುವ ಇಚ್ಛೆ ಇದ್ದರೂ ಅವಕಾಶ ನೀಡಲಾಗುವುದು ಎಂದು ಪರಮೇಶ್ವರ್ ಇದೇ ವೇಳೆ ಬವೇರಿಯಾ ಪ್ರತಿನಿಧಿಗಳಿಗೆ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News