ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ ಪ್ರಶಸ್ತಿ: ಗಣೇಶ್ ಸೋಮಯಾಜಿ, ಎಸ್.ತಿಪ್ಪೇಸ್ವಾಮಿ, ಕೆ.ಆರ್.ಸ್ವಾಮಿ ಆಯ್ಕೆ
ಮೂಡುಬಿದಿರೆ, ನ. 2: ಆಳ್ವಾಸ್ ನುಡಿಸಿರಿ 2018ರ ಅಂಗವಾಗಿ ನಡೆಯುವ ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ ನಡೆಯಲಿದ್ದು, ಮೂರೂ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಮೂವರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರಶಸ್ತ ನೀಡಿ ಗೌರವಿಸಲಿದೆ.
ಪ್ರಶಸ್ತಿಯು 25,000 ನಗದು, ಪ್ರಶಸ್ತಿಪತ್ರ ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿದೆ.ಮಂಗಳೂರಿನ ಗಣೇಶ್ ಸೋಮಯಾಜಿ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿಗೆ, ಖ್ಯಾತ ವನ್ಯಜೀವಿ ಛಾಯಾಚಿತ್ರಗ್ರಾಹಕ ಎಸ್.ತಿಪ್ಪೇಸ್ವಾಮಿಆಳ್ವಾಸ್ ಛಾಯಾಚಿತ್ರಸಿರಿ ಪ್ರಶಸ್ತಿಗೆ ಹಾಗೂ ವ್ಯಂಗ್ಯಚಿತ್ರ ಪ್ರವೀಣರಾದಶ್ರೀ ಕೆ.ಆರ್.ಸ್ವಾಮಿ ಆಳ್ವಾಸ್ ವ್ಯಂಗ್ಯಚಿತ್ರಸಿರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನ.13ರಂದು ಬೆಳಗ್ಗೆ 11ಗಂಟೆಗೆ ವಿದ್ಯಾಗಿರಿಯ ಡಾ.ಎಸ್.ಆಚಾರ್ಯ ಸಭಾಂಗಣದಲ್ಲಿ ನೀಡಿ ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಆಯ್ದ ಛಾಯಾ ಚಿತ್ರಸಿರಿಯಲ್ಲಿ ಆಯ್ದ ಛಾಯಾಚಿತ್ರಗಳ ಪ್ರದರ್ಶನಗಳೂ ನಡೆಯಲಿವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.