×
Ad

ಅರೆ ವೈದ್ಯಕೀಯ ಕೋರ್ಸುಗಳಿಗೆ ಸೀಟು ಹಂಚಿಕೆ

Update: 2018-11-02 22:25 IST

ಬೆಂಗಳೂರು, ನ.2: 2018-19ನೆ ಸಾಲಿನ ಅರೆ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಎರಡನೆ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಅ.31ರಂದು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ.

ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ಶುಲ್ಕವನ್ನು ಪಾವತಿಸಿ (ಪಾವತಿಸದೇ ಇದ್ದಲ್ಲಿ), ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನವೆಂಬರ್ 5ರೊಳಗಾಗಿ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ ನೀಡಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News