ಚಾಮರಾಜನಗರ: 'ಅನ್ನಭಾಗ್ಯ' ಅಕ್ಕಿ ಕೇರಳಕ್ಕೆ ಅಕ್ರಮ ಸಾಗಾಟ; ಇಬ್ಬರ ಬಂಧನ

Update: 2018-11-02 17:14 GMT

ಚಾಮರಾಜನಗರ,ನ.2: ಅಕ್ರಮವಾಗಿ 'ಅನ್ನಭಾಗ್ಯ' ಅಕ್ಕಿಯನ್ನು ಕೇರಳಕ್ಕೆ ಸಾಗಿಸುತ್ತಿದ್ದ ಪ್ರಕರಣವನ್ನು ಕೊಳ್ಳೇಗಾಲ ಪೊಲೀಸರು ಮಿಂಚಿನ ದಾಳಿ ನಡೆಸಿ ಬಯಲಿಗೆಳೆದಿದ್ದು, ಸುಮಾರು 170 ಚೀಲದಲ್ಲಿದ್ದ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಸುತ್ತಮುತ್ತಲಿನ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ವಾಹನದಲ್ಲಿ ತುಂಬಿಕೊಂಡು ಕೇರಳಕ್ಕೆ ಸಾಗಿಸುತ್ತಿರುವ ಬಗ್ಗೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ರಾಜಣ್ಣರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸುಮಾರು 170 ಪಡಿತರ ಅಕ್ಕಿ ಚೀಲ ತುಂಬಿಸಿಟ್ಟಿದ್ದ ಎರಡು ಮಿನಿ ಲಾರಿ ವಶಪಡಿಸಿಕೊಳ್ಳಲಾಗಿದೆ. 

ನವೀದ್ ಮತ್ತು ತೌಷಿಕ್ ಎಂಬಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿ ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಕ್ರಮ ಪಡಿತರ ಸಾಗಾಣಿಕೆ ಜಾಲದ ಪ್ರಮುಖ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News