ಸುನಂದಾ ಪುಷ್ಕರ್ ಸಾವು ಪ್ರಕರಣ: ನಿರ್ದಿಷ್ಟ ದಾಖಲೆಗಳನ್ನು ತರೂರ್‌ಗೆ ನೀಡಲು ನ್ಯಾಯಾಲಯ ಆದೇಶ
Update: 2018-11-03 22:08 IST
ಹೊಸದಿಲ್ಲಿ, ನ. 3: ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದ ನಿರ್ದಿಷ್ಟ ದಾಖಲೆಗಳನ್ನು ಆರೋಪಿ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್‌ಗೆ ಹಸ್ತಾಂತರಿಸುವಂತೆ ಇಲ್ಲಿನ ನ್ಯಾಯಾಲಯ ಶನಿವಾರ ದಿಲ್ಲಿ ಪೊಲೀಸರಿಗೆ ನಿರ್ದೇಶಿಸಿದೆ.
ಪ್ರಾಸಿಕ್ಯೂಶನ್ ನೀಡಿದ ನಿರ್ದಿಷ್ಟ ಇಲೆಕ್ಟ್ರಾನಿಕ್ಸ್ ಪುರಾವೆಗಳು ಉತ್ತಮ ಸ್ಥಿತಿಯಲ್ಲಿ ಇಲ್ಲ ಎಂದು ಶಶಿ ತರೂರ್ ಅವರ ಹಿರಿಯ ವಕೀಲ ವಿಕಾಸ್ ಪಾಹ್ವಾ ಹೇಳಿದ ಬಳಿಕ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಈ ನಿರ್ದೇಶನ ಜಾರಿಗೊಳಿಸಿದ್ದಾರೆ. ಇಲೆಕ್ಟ್ರಾನಿಕ್ಸ್ ದಾಖಲೆಯ ಹೊಸ ಪ್ರತಿಯನ್ನು ತರೂರ್ ಅವರಿಗೆ ಹಸ್ತಾಂತರಿಸಲಾಗುವುದು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾತ್ಸವ್ ನ್ಯಾಯಾಲಯಕ್ಕೆ ತಿಳಿಸಿದರು. ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 1ಕ್ಕೆ ಮುಂದೂಡಿತು.