×
Ad

ಉಪಚುನಾವಣೆ ಫಲಿತಾಂಶದ ಬಳಿಕ ಜೆಡಿಎಸ್-ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ: ಯಡಿಯೂರಪ್ಪ

Update: 2018-11-03 22:37 IST

ಶಿವಮೊಗ್ಗ, ನ. 3: ಬಿ.ವೈ.ರಾಘವೇಂದ್ರ ಗೆಲುವು ನಿಶ್ಚಿತವಾಗಿದೆ. ಇದು ನೂರಕ್ಕೆ ನೂರರಷ್ಟು ಸತ್ಯ. ಎಷ್ಟು ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ ಎಂಬುವುದನ್ನು ಕಾದು ನೋಡುತ್ತಿದ್ದೇವೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಶನಿವಾರ ಶಿಕಾರಿಪುರ ಪಟ್ಟಣದ ತಾಲೂಕು ಕಚೇರಿ ಕಟ್ಟಡದಲ್ಲಿನ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಉಪ ಚುನಾವಣೆಯ ಫಲಿತಾಂಶದ ನಂತರ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಬದಲಾವಣೆಯಾಗಲಿದೆ. ಏನಾಗಲಿದೆ ಎಂಬುವುದನ್ನು ಕಾದು ನೋಡಿ ಎಂದು ತಿಳಿಸಿದ್ದಾರೆ. 

ಬಳ್ಳಾರಿಯಲ್ಲಿಯೂ ಬಿಜೆಪಿ ಪಕ್ಷ ಗೆಲ್ಲುವ ಅನುಕೂಲಕರ ವಾತಾವರಣವಿದೆ. ಮಂಡ್ಯದಲ್ಲಿಯೂ ಬಿಜೆಪಿ ಗೆದ್ದರೂ ಅಚ್ಚರಿಯಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ತಕ್ಕ ಉತ್ತರವನ್ನು ಮತದಾರರು ನೀಡಲಿದ್ದಾರೆ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News