ಅತ್ಯಧಿಕ ಮತಗಳ ಅಂತರದಲ್ಲಿ ಜಯ: ಬಿ.ವೈ.ರಾಘವೇಂದ್ರ
Update: 2018-11-03 22:42 IST
ಶಿವಮೊಗ್ಗ, ನ. 3: ಪ್ರಸ್ತುತ ಚುನಾವಣೆಯಲ್ಲಿ ತಾವು ಅತ್ಯಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದೇನೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಕ್ಷೇತ್ರದ ಮತದಾರರ ಬೆಂಬಲ ತಮ್ಮ ಪರವಾಗಿರಲಿದೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ಶಿಕಾರಿಪುರ ಪಟ್ಟಣದ ತಾಲೂಕು ಕಚೇರಿ ಕಟ್ಟಡದ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 'ಜೆಡಿಎಸ್ - ಕಾಂಗ್ರೆಸ್ ಮೈತ್ರಿಕೂಟ ನಡೆಸಿದ ಯಾವುದೇ ಪ್ರಯತ್ನಗಳು ಫಲ ನೀಡುವುದಿಲ್ಲವಾಗಿದೆ. ಬಿಜೆಪಿ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರ ಪರಿಶ್ರಮದಿಂದ ತಮ್ಮ ಗೆಲುವು ಶತಃಸಿದ್ದವಾಗಿದೆ ಎಂದು ಹೇಳಿದ್ದಾರೆ.