ಗಾಂಜಾ ಸೇವನೆ ಆರೋಪ; ಇಬ್ಬರ ಬಂಧನ
Update: 2018-11-03 23:34 IST
ಮಂಗಳೂರು, ನ.3: ಚಿಲಿಂಬಿ ಮೋರ್ ಸೂಪರ್ ಮಾರ್ಕೆಟ್ ಬಳಿ ಗಾಂಜಾ ಸೇವನೆಯಲ್ಲಿ ತೊಡಗಿದ್ದ ಆರೋಪದಲ್ಲಿ ಇಬ್ಬರನ್ನು ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ತಂಡ ಕಾರ್ಯಾಚರಣೆ ನಡೆಸಿ ಶನಿವಾರ ಬಂಧಿಸಿದ್ದಾರೆ.
ಮಂಜೇಶ್ವರ ಕುಂಜತ್ತೂರು ನಿವಾಸಿಗಳಾದ ಖಲೀಲ್ ಕಾಲಿದ್ ಕುಂಜತ್ತೂರು (23), ಅಬ್ದುಲ್ ನಾಸೀರ್ ಇಬ್ರಾಹೀಂ (22) ಬಂಧಿತ ಆರೋಪಿಗಳು.
ಆರೋಪಿಗಳು ಗಾಂಜಾ ಸೇವನೆ ಕೃತ್ಯಕ್ಕೆ ಬಳಸಿದ ಬೈಕ್‌ನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ಉರ್ವ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಗಿದೆ.