ಪಕ್ಷ ಬದಲಿಸುವ ಪ್ರಶ್ನೆಯೇ ಇಲ್ಲ: ಶಾಮನೂರು ಶಿವಶಂಕರಪ್ಪ ಸ್ಪಷ್ಟಣೆ

Update: 2018-11-03 18:31 GMT

ದಾವಣಗೆರೆ,ನ.3: ಉಪ ಮುಖ್ಯಮಂತ್ರಿ ಸ್ಥಾನ ನೀಡುತ್ತೇವೆ ಎಂದು ಬಿ.ಎಸ್‍ವೈ ಕರೆಯುತ್ತಿದಾರೆ. ಅದರೆ ನಾನು ಯಾವತ್ತಿಗೂ ಕಾಂಗ್ರೆಸ್ ಬಿಡಲ್ಲ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಬಿಜೆಪಿಗೆ ಬರುವಂತೆ ಸಾಕಷ್ಟು ಆಹ್ವಾನವಿದೆ. ಹಾಗೆಂದ ಮಾತ್ರಕ್ಕೆ ನಾನೇನೂ ಉಪ ಮುಖ್ಯಮಂತ್ರಿ ಆಗಲೇಬೇಕೆಂದಿಲ್ಲ. ಕಾಂಗ್ರೆಸ್ ಪಕ್ಷದ ನಿಷ್ಟಾವಂತ ನಾನು. ನಾನು ಪಕ್ಷ ಬದಲಿಸುವ ಪ್ರಶ್ನೆಯೇ ಇಲ್ಲ. ಪಕ್ಷ ಜವಾಬ್ದಾರಿ ಕೊಟ್ಟರೆ ನಿರ್ವಹಿಸುವೆ. ಇಲ್ಲದಿದ್ದರೆ ನನ್ನ ಕ್ಷೇತ್ರದ ಕೆಲಸ ಮಾಡಿಕೊಂಡಿರುತ್ತೇನೆ ಎಂದು ತಿರುಗೇಟು ನೀಡಿದರು. 

ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭೆ, ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಐವರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ. ಬಳ್ಳಾರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತಾವು ಪ್ರಚಾರ ಮಾಡಿದ್ದು, ಎರಡೂ ಕಡೆ ಮೈತ್ರಿ ಅಭ್ಯರ್ಥಿಗಳ ಪರ ವಾತಾವರಣವಿದೆ ಎಂದ ಅವರು, ಮೈತ್ರಿ ಪಕ್ಷಗಳ ಪರ ಅಲೆಯೂ ಕಂಡು ಬಂದಿದ್ದು, ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ, ಬಳ್ಳಾರಿಯಲ್ಲಿ ಉಗ್ರಪ್ಪ ಜಯ ಸಾಧಿಸಲಿದ್ದಾರೆ ಎಂದು ಹೇಳಿದರು.

ಎಸ್.ಎ.ಆರ್ ನಿಧನಕ್ಕೆ ಸಂತಾಪ
ಕಾಂಗ್ರೆಸ್ಸಿನ ಯುವ ಮುಖಂಡ, ಹರಪನಹಳ್ಳಿ ಮಾಜಿ ಶಾಸಕ ಎಂ.ಪಿ. ರವೀಂದ್ರ ಇನ್ನೂ ಚಿಕ್ಕ ವಯಸ್ಸು. ತನ್ನ ಆರೋಗ್ಯದ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದಿತ್ತು. ಮಾಜಿ ಉಪ ಮುಖ್ಯಮಂತ್ರಿ ದಿ.ಎಂ.ಪಿ. ಪ್ರಕಾಶ್ ಏಕೈಕ ಪುತ್ರ ಎಂ.ಪಿ. ರವೀಂದ್ರ. ಬಳ್ಳಾರಿ ಜಿಲ್ಲೆಯಲ್ಲಿ ಸಾಕಷ್ಟು ಕೆಲಸ ಮಾಡಿ, ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ರವೀಂದ್ರ ಎಲ್ಲರೊಂದಿಗೂ ಒಡನಾಟ ಹೊಂದಿದ್ದಂತಹ ಜನಾನುರಾಗಿ. ಇಂತಹ ಚಿಕ್ಕ ವಯಸ್ಸಿನಲ್ಲೇ ರವೀಂದ್ರ ವಿಧಿವಶರಾಗಿದ್ದು ನಿಜಕ್ಕೂ ನೋವಿನ ಸಂಗತಿ. ಮೃತರ ಕುಟುಂಬ, ಅಭಿಮಾನಿ, ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಅವರು ಪ್ರಾರ್ಥಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News