ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ಅವಕಾಶ ನೀಡುವುದಿಲ್ಲ: ಜಗದೀಶ್ ಶೆಟ್ಟರ್

Update: 2018-11-04 12:34 GMT

ಹುಬ್ಬಳ್ಳಿ, ನ. 4: ರಾಜ್ಯ ಸರಕಾರ ಜನರ ಭಾವನೆಗಳಿಗೆ ವಿರುದ್ಧವಾಗಿ ಟಿಪ್ಪು ಜಯಂತಿ ಆಚರಣೆ ಮಾಡಬಾರದು. ಜಯಂತಿಯಿಂದ ಒಂದು ವೇಳೆ ಅಹಿತಕರ ಘಟನೆ ಸಂಭವಿಸಿದ ಅದಕ್ಕೆ ಸರಕಾರವೇ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಎಚ್ಚರಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ಅವಕಾಶ ನೀಡುವುದಿಲ್ಲ. ಈ ಹಿಂದೆ ಕುಮಾರಸ್ವಾಮಿ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿದ್ದರು, ಇದೀಗ ಸರಕಾರದ ವತಿಯಿಂದ ಟಿಪ್ಪು ಆಚರಣೆ ಮಾಡುವುದು ಸಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್-ಜೆಡಿಎಸ್ ಪಕ್ಷದಿಂದ ಟಿಪ್ಪು ಜಯಂತಿ ಆಚರಣೆಗೆ ನಮ್ಮ ವಿರೋಧವಿಲ್ಲ. ಆದರೆ, ಸಾರ್ವಜನಿಕರ ಹಣವನ್ನು ವೆಚ್ಚ ಮಾಡಿ ಒಂದು ಸಮುದಾಯವನ್ನು ಓಲೈಕೆ ಮಾಡಲು ಟಿಪ್ಪು ಜಯಂತಿ ಆಚರಣೆ ಮಾಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News