ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಬೇಸರವಿಲ್ಲ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

Update: 2018-11-04 13:41 GMT

ಬೆಂಗಳೂರು, ನ. 4: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಿರುವುದಕ್ಕೆ ನನಗೆ ಯಾವುದೇ ಬೇಸರವಿಲ್ಲ ಎಂದು ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷೆ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ. ವರಿಷ್ಠರ ಸಲಹೆಗಳು ನನ್ನ ರಾಜಕೀಯ ಜೀವನಕ್ಕೆ ಉತ್ತಮ ಅಡಿಪಾಯ. ಮಹಿಳಾ ಸಬಲೀಕರಣ ಮತ್ತು ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಪ್ರಾಮಾಣಿಕವಾಗಿ ದುಡಿದಿದ್ದೇನೆ ಮತ್ತು ಮುಂದಿನ ದಿನಗಳಲ್ಲಿಯೂ ಮಹಿಳಾ ಪರ ಹೋರಾಟ ನಡೆಸುವೆ ಎಂದು ಅವರು ತಿಳಿಸಿದ್ದಾರೆ.

ಒಬ್ಬ ವ್ಯಕ್ತಿಯ ಉತ್ತಮ ಸೇವೆ ಒಂದು ಹಂತದ ವರೆಗೆ ಮಾತ್ರ ಲಭಿಸುತ್ತದೆ ಹೊರತು ದೀರ್ಘ ಅವಧಿಯವರೆಗೆ ಅಲ್ಲ ಎಂದು ದೊಡ್ಡವರು ಹೇಳಿದ್ದಾರೆ. ಹೀಗಾಗಿ, ನನಗೆ ಇಲ್ಲಿಯವರೆಗೆ ಪರೋಕ್ಷವಾಗಿ ಹಾಗೂ ನೇರವಾಗಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುವೆ ಎಂದು ಹೆಬ್ಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News