×
Ad

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಹತ್ಯೆ

Update: 2018-11-04 20:41 IST

ಬೆಂಗಳೂರು, ನ.4: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಕೊಲೈದಿರುವ ಘಟನೆ ಇಲ್ಲಿ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರವಿವಾರ ಸಂಜೆ ಸುಮಾರಿಗೆ ವಿಜಯನಗರ ಫುಡ್ ಸ್ಟ್ರೀಟ್ ಬಳಿ ಈ ಘಟನೆ ನಡೆದಿದ್ದು, ಮಹಾದೇವ್ ಎಂಬಾತ ಕೊಲೆಯಾಗಿರುವ ಯುವಕ ಎನ್ನಲಾಗಿದೆ.

ಹಳೇ ದ್ವೇಷದ ಹಿನ್ನಲೆಯಲ್ಲಿ ದುಷ್ಕರ್ಮಿಗಳು, ಮಹಾದೇವ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಈ ಸಂಬಂಧ ಮೃತ ದೇಹವನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಪೊಲೀಸರು, ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ವಿಜಯನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News