ಪೊಲೀಸ್ ಅಧಿಕಾರಿಗೆ ಹಲ್ಲೆಗೈದ ಬಿಜೆಪಿ ನಾಯಕ ಮನೋಜ್ ತಿವಾರಿ
Update: 2018-11-04 21:37 IST
ಹೊಸದಿಲ್ಲಿ, ನ.4: ದಿಲ್ಲಿಯ ‘ಸಿಗ್ನೇಚರ್ ಸೇತುವೆ’ ಉದ್ಘಾಟನೆ ವೇಳೆ ಬಿಜೆಪಿ ನಾಯಕ ಮನೋಜ್ ತಿವಾರಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಕಾರ್ಯಕ್ರಮಕ್ಕೆ ಆಗಮಿಸಿದ್ದ ತಿವಾರಿಯವರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಇದರಿಂದ ಕೋಪಗೊಂಡ ತಿವಾರಿ ಒಳಗೆ ನುಗ್ಗಲು ಯತ್ನಿಸಿದ್ದು ಅವರನ್ನು ಪೊಲೀಸರು ತಡೆದಿದ್ದರು. ಈ ಸಂದರ್ಭ ತಿವಾರಿ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ.
“ನನ್ನ ಕ್ಷೇತ್ರದಲ್ಲಿ ಸ್ಥಗಿತಗೊಂಡಿದ್ದ ಈ ಸೇತುವೆಯ ಕಾಮಗಾರಿಯನ್ನು ನಾನೇ ಆರಂಭಿಸಿದ್ದೆ. ಈಗ ಅರವಿಂದ್ ಕೇಜ್ರಿವಾಲ್ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ” ಎಂದು ತಿವಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.