ಲೈಂಗಿಕ ಕಿರುಕುಳ ಆರೋಪ: ಬಿಜೆಪಿ ಮುಖಂಡ ಪಕ್ಷದಿಂದ ವಜಾ

Update: 2018-11-04 16:51 GMT

ಡೆಹ್ರಾಡೂನ್,ನ.4: ಪಕ್ಷದ ಕಾರ್ಯಕರ್ತೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಉತ್ತರಾಖಂಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್‌ನನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ಪಕ್ಷದ ವಕ್ತಾರರು ರವಿವಾರ ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಪಡೆಯುವುದಕ್ಕೂ ಮೊದಲು ಸಂಜಯ್ ಕುಮಾರ್ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಕಾರ್ಯಕರ್ತರಾಗಿದ್ದರು ಎಂದು ಮಾಧ್ಯಮ ವರದಿ ತಿಳಿಸಿದೆ. “ಸಂಜಯ್ ಕುಮಾರ್ ಪಕ್ಷದ ಮುಖ್ಯ ಕಚೇರಿಯಲ್ಲಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ, ನನಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಮತ್ತು ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ವಂಚಿಸಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ.

ದೇಶಾದ್ಯಂತ ಹರಡಿರುವ ಮೀ ಟೂ ಚಳುವಳಿಯ ಕಾರಣ ಬಹಳಷ್ಟು ಮಹಿಳೆಯರು ತಮ್ಮ ಮೇಲೆ ನಡೆದಿರುವ ಲೈಂಗಿಕ ಕಿರುಕುಳ ಪ್ರಕರಣಗಳನ್ನು ಬಹಿರಂಗಪಡಿಸುತ್ತಿದ್ದಾರೆ. ಕಳೆದ ತಿಂಗಳು ಕಾಂಗ್ರೆಸ್ ಬೆಂಬಲಿತ ಎನ್‌ಎಸ್‌ಯುಐ ಮುಖ್ಯಸ್ಥ ಫೈರೋಝ್ ಖಾನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News